Home Important ಇನ್ನು ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಸುರಿಯಲಿದೆಯಂತೆ ಭಾರೀ ಮಳೆ: ಇಲಾಖೆ ಏನು ಹೇಳಿದೆ ಗೊತ್ತಾ?

ಇನ್ನು ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಸುರಿಯಲಿದೆಯಂತೆ ಭಾರೀ ಮಳೆ: ಇಲಾಖೆ ಏನು ಹೇಳಿದೆ ಗೊತ್ತಾ?

SHARE

ಇನ್ನು ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ಕೇರಳದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮೈಸೂರು ಜಿಲ್ಲೆಯ ಕಬಿನಿ ಜಲಾಶಯದ ಒಳ ಹರಿವು ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಜಲಾಶಯ ಭರ್ತಿ ಆಗಿರೋ ಕಾರಣ ಒಳಹರಿವಿನ ಪ್ರಮಾಣದಷ್ಟೆ ಹೊರಹರಿವು ಹೆಚ್ಚಿಸಲಾಗಿದೆ.

ಇದಲ್ಲದೇ ಕಳೆದ ಮೂರು ದಿನಗಳಿಂದ ಮಳೆರಾಯ ಆರ್ಭಟಿಸುತ್ತಿದ್ದು, ರಾಜ್ಯದ ಹಲವೆಡೆ ನದಿ, ಕೊಳ್ಳಗಳು ತುಂಬಿ, ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಾಜ್ಯದ ಜನತೆಗ ಎಚ್ಚರಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈಗಾಗಲೇ ಕೇರಳದಲ್ಲಿ ಭಾರೀ ಮಳೆಯಿಂದ ಸಾವಿನ ಸಂಖ್ಯೆ 30ಕ್ಕೆ ಏರಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇನ್ನೂ ಕೆಲವೆಡೆ ಮರಗಳು ಧರೆಗುರುಳಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು.ಈ ಕಾರಣದಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.