Home Local ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದ ಶ್ರೀ ಶ್ರೀ ಆತ್ಮಾನಂದ ಸ್ವಾಮೀಜಿ

ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದ ಶ್ರೀ ಶ್ರೀ ಆತ್ಮಾನಂದ ಸ್ವಾಮೀಜಿ

SHARE

ಗೋಕರ್ಣ : ಪ ಪೂ ಶ್ರೀ ಶ್ರೀ ಆತ್ಮಾನಂದ ಸ್ವಾಮೀಜಿ , ಸಿದ್ಧಾರೂಢಮಠ, ಕೊಪ್ಪಳ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 584ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ , ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು .

ಶ್ರೀ ದೇವಾಲಯದ ಪರವಾಗಿ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಲಾಯಿತು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಭಟ್ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .