Home Local ಪ ಪೂ ಶ್ರೀ ಶ್ರೀ ಮಹಾದೇವ ಮಹಾಸ್ವಾಮಿಗಳಿಗೆ ಗೋಕರ್ಣ ಗೌರವ

ಪ ಪೂ ಶ್ರೀ ಶ್ರೀ ಮಹಾದೇವ ಮಹಾಸ್ವಾಮಿಗಳಿಗೆ ಗೋಕರ್ಣ ಗೌರವ

SHARE

ಗೋಕರ್ಣ : ಪ ಪೂ ಶ್ರೀ ಶ್ರೀ ಮಹಾದೇವ ಮಹಾಸ್ವಾಮಿಗಳು , ಅಡವಿಸಿದ್ಧೇಶ್ವರ ಮಠ, ಬೆಳಗಾವಿ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 587ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ , ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು .

ಶ್ರೀ ದೇವಾಲಯದ ಪರವಾಗಿ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಲಾಯಿತು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಭಟ್ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .