Home Important ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಿದೆ ಭಾರತೀಯ ಸೇನಾಪಡೆ!

ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಿದೆ ಭಾರತೀಯ ಸೇನಾಪಡೆ!

SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಭಾನುವಾರ ಹೊಡೆದುರುಳಿಸಿದೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಭಾರತೀಯ ಸೇನಾಪಡೆ ಉಗ್ರರನ್ನು ಹತ್ಯೆ ಮಾಡಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಸ್ಥಳದಲ್ಲಿ ಮತ್ತಷ್ಟು ಉಗ್ರರಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. ಉಗ್ರರನ್ನು ಹತ್ಯೆ ಮಾಡಿರುವ ಕುರಿತಂತೆ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ.ವೈದ್ ಅವರು ದೃಢಪಡಿಸಿದ್ದಾರೆ.