Home Information ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿನ ಪ್ರಾಜೆಕ್ಟ್ ಕನ್ಸಲ್’ಟೆಂಟ್, ಪ್ರಾಜೆಕ್ಟ್ ಕೋ ಆರ್ಡಿನೇಟರ್, ಪ್ರಾಜೆಕ್ಟ್...

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿನ ಪ್ರಾಜೆಕ್ಟ್ ಕನ್ಸಲ್’ಟೆಂಟ್, ಪ್ರಾಜೆಕ್ಟ್ ಕೋ ಆರ್ಡಿನೇಟರ್, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ.

SHARE

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿನ ಪ್ರಾಜೆಕ್ಟ್ ಕನ್ಸಲ್’ಟೆಂಟ್, ಪ್ರಾಜೆಕ್ಟ್ ಕೋ ಆರ್ಡಿನೇಟರ್, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 08
ಹುದ್ದೆಗಳ ವಿವರ
1.ಪ್ರಾಜೆಕ್ಟ್ ಕನ್ಸಲ್’ಟೆಂಟ್ – 01
2.ಪ್ರಾಜೆಕ್ಟ್ ಕೋ ಆರ್ಡಿನೇಟರ್ -03
3.ಪ್ರಾಜೆಕ್ಟ್ ಅಸಿಸ್ಟೆಂಟ್ – 04
ವಿದ್ಯಾರ್ಹತೆ : ಕ್ರ ಸಂ 1 ಮತ್ತು2ರ ಹುದ್ದೆಗೆ ನಿರ್ವಹಣೆ, ಸಾಮಾಜಿಕ ಕಾರ್ಯ, ಸಮಾಜಶಾಸ್ತ್ರ, ಸಾರ್ವಜನಿಕ ಆಡಳಿತಾಧಿಕಾರಿ, ಅರ್ಥಶಾಸ್ತ್ರ, ರಾಜಕೀಯ ವಿಜ್ಞಾನ, ವಿಷಯದಲ್ಲಿ ಸ್ನಾತಕೋತ್ತರ ಪದವಿ, ಕ್ರ ಸಂ 3ರ ಹುದ್ದೆಗೆ ಯಾವುದೇ ಪದವಿ ಪಡೆದಿರಬೇಕು.

ವಯೋಮಿತಿ : ಕ್ರ ಸಂ 1ರ ಹುದ್ದೆಗೆ ಗರಿಷ್ಠ 45 ವರ್ಷ, ಕ್ರ ಸಂ 2ರ ಹುದ್ದೆಗೆ ಗರಿಷ್ಠ 40 ವರ್ಷ, ಕ್ರ ಸಂ 3ರ ಹುದ್ದೆಗೆ ಗರಿಷ್ಠ 38 ವರ್ಷ ನಿಗದಿಗೊಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ : ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯದೇಗುಲ, 1ನೇ ಮಹಡಿ, ಸಿದ್ದಯ್ಯ ರಸ್ತೆ, ಬೆಂಗಳೂರು – 560027 ಇಲ್ಲಿಗೆ ತಲುಪುವಂತೆ ಸಲ್ಲಿಸಲು ತಿಳಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2018
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ www.kslsa.kar.nic.in ಗೆ ಭೇಟಿ ನೀಡಿ.