Home Local ಶ್ರೀ ಶ್ರೀ ಪ್ರಖರನಾಥಜೀ ಮಹಾರಾಜ್ ಅವರಿಗೆ ಗೋಕರ್ಣ ಗೌರವ.

ಶ್ರೀ ಶ್ರೀ ಪ್ರಖರನಾಥಜೀ ಮಹಾರಾಜ್ ಅವರಿಗೆ ಗೋಕರ್ಣ ಗೌರವ.

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ಪ್ರಖರನಾಥಜೀ ಮಹಾರಾಜ್ , ಶ್ರೀ ಕ್ಷೇತ್ರ ಹಂಡಿ ಬಡಗನಾಥ ಮಠ , ಬೆಳಗಾವಿ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 596ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ , ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು .

ಶ್ರೀ ದೇವಾಲಯದ ಪರವಾಗಿ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಲಾಯಿತು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಭಟ್ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .