Home Local ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ: ಯಶಸ್ವಿಯಾಯ್ತು ಕಾರ್ಯಕ್ರಮ.

ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ: ಯಶಸ್ವಿಯಾಯ್ತು ಕಾರ್ಯಕ್ರಮ.

SHARE

ಭಟ್ಕಳ :ಕಾರ್ಯಕ್ರಮದಲ್ಲಿ ಶ್ರೀ.ಆರ್.ಡಿ.ಪ್ರಭು, ನಿವೃತ್ತ ಮುಖ್ಯ ಶಿಕ್ಷಕ ನ್ಯೂ ಇಂಗ್ಲೀಷ್ ಸ್ಕೂಲ್, ಡಾ.ನರಸಿಂಹಮೂರ್ತಿ, ಪ್ರಾಂಶುಪಾಲರು, ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯ, ಶ್ರೀ.ಜ್ಯೋತಿಶ್, ಪ್ರಾಂಶುಪಾಲರು, ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್ ಉಪಸ್ಥಿತರಿದ್ದರು.

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿಗಳನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಶ್ರೀ. ಆರ್.ಡಿ.ಪ್ರಭುರವರು ಮಾತನಾಡಿ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಜ್ಞಾನ, ಶಿಸ್ತು, ಮೌಲ್ಯಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಬೇಕೆಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಶಿಕ್ಷಕರಿಗೆ ಆರತಿ ಮಾಡುವ ಮೂಲಕ ತಮ್ಮ ಗೌರವವನ್ನು ಸೂಚಿಸಿದರು.

ಹಾಗೆಯೇ ವಿದ್ಯಾರ್ಥಿಗಳು ಶಿಕ್ಷಕರಿಗೆ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.