Home Local ಭಾರತ್ ಬಂದ್ ಹಿನ್ನೆಲೆ : ಕುಮಟಾದಲ್ಲಿಯೂ ಮೆರವಣಿಗೆ ಮೂಲಕ ಮನವಿ ಸಲ್ಲಿಕೆ

ಭಾರತ್ ಬಂದ್ ಹಿನ್ನೆಲೆ : ಕುಮಟಾದಲ್ಲಿಯೂ ಮೆರವಣಿಗೆ ಮೂಲಕ ಮನವಿ ಸಲ್ಲಿಕೆ

SHARE

ಕುಮಟಾ: ತೈಲ ಬೆಲೆ ಏರಿಕೆ ಹಾಗೂ ತೆರಿಗೆ ಹೆಚ್ಚಿಸುತ್ತಿರುವುದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬಂದ್ ಗೆ ಕರೆ ನೀಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇರುವುದರಿಂದ  ಸೆ.10 ರಂದು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಾಂಗ್ರೆಸ್ ಕರೆ ನೀಡಿರುವ ಬಂದ್ ಗೆ ಐಟಿಯುಸಿ, ಎಡಪಕ್ಷಗಳ ಸಹ ಸಂಘಟನೆಗಳು ಬೆಂಬಲ ವ್ಯಕ್ತಪಡಿಸುವ ಸಾಧ್ಯತೆ ಇದ್ದು, ಜೆಡಿಎಸ್ ಸಹ ಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ ಕುಮಟಾದಲ್ಲಿಯೂ ಮೆರವಣಿಗೆ ಹಾಗೂ ಮನವಿ ಸಲ್ಲಿಕೆ ಪ್ರಕ್ರಿಯೆ‌ನಡೆಯಿತು.

ಕೇಂದ್ರ ಸರ್ಕಾರ ತೆರಿಗೆ ಹೆಚ್ಚಿಸುತ್ತಿದ್ದು, ಪೆಟ್ರೋಲ್ ದರ ಏರಿಕೆಯ ಮೇಲೆ ಇದು ಪರಿಣಾಮ ಬೀರಿದೆ ಈ ಹಿನ್ನೆಲೆಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 82 ರೂಪಾಯಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಕರೆ ನೀಡಲಾಗಿರುವ ಭಾರತ್ ಬಂದ್ ಗೆ ಕುಮಟಾದಲ್ಲಿಯೂ ಉತ್ತಮ ‌ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ವಿವರಿಸಿದರು. ಬಿ.ಜೆ.ಪಿ ಸರಕಾರಾದ ವಿರುದ್ದ ಹರಿ ಹಾಯ್ದರು.

ಈ ಸಂದರ್ಭದಲ್ಲಿ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ
ವಿ.ಎಲ್‌ ನಾಯ್ಕ , ಮಧುಸೂಧನ ಶೇಟ್,ರತ್ನಾಕರ ನಾಯ್ಕ ಹಾಗೂ ಇನ್ನಿತರ ಪ್ರಮುಖರು ಹಾಜರಿದ್ದರು.