Home Local ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿಯ ರಾಜ್ಯ ಮಟ್ಟದ ಸಾಧನೆ

ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿಯ ರಾಜ್ಯ ಮಟ್ಟದ ಸಾಧನೆ

SHARE

ಹೊನ್ನಾವರ : ದಿನಾಂಕ 05/9/2018, ರಂದು, ಆಳ್ವಾಸ ಎಜ್ಯುಕೇಶನ್ ಪೌಂಡೇಶನ್, ಮೂಡುಬಿದಿರೆ, ದಕ್ಷಿಣ ಕನ್ನಡ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಅಮೆಚ್ಯುರ್ ಕ್ರೀಡಾಕೂಟದಲ್ಲಿ ಹೊನ್ನಾವರದ ಎಂ.ಪಿ.ಇ. ಸೊಸೈಟಿಯ, ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ಕು. ಆದರ್ಶ ನಾಗೇಶ ನಾಯ್ಕ, ಜಾವೆಲಿನ್ ಎಸೆತದಲ್ಲಿ ಬಂಗಾರದ ಪದಕ ಪಡೆದು ಮಹಾವಿದ್ಯಾಲಯಕ್ಕೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುತ್ತಾನೆ. ಇವನ ಸಾಧನೆಗೆ ಕಾಲೇಜಿನ ಘನ ಆಡಳಿತ ಮಂಡಳಿ, ಪ್ರಾಚಾರ್ಯರು, ದೈಹಿಕ ಶಿಕ್ಷಣ ನಿರ್ದೇಶಕರು, ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು ಶ್ಲಾಘಿಸಿದ್ದಾರೆ.