Home Important ಗೋಕರ್ಣ ದೇವಾಲಯವನ್ನು ವಶಪಡಿಸಿಕೊಳ್ಳುವುದು, ನ್ಯಾಯಾಂಗಕ್ಕೆ ಸರ್ಕಾರ ಮಾಡುತ್ತಿರುವ ಅಪಚಾರ : ಶ್ರೀ ರಾಮಚಂದ್ರಾಪುರ...

ಗೋಕರ್ಣ ದೇವಾಲಯವನ್ನು ವಶಪಡಿಸಿಕೊಳ್ಳುವುದು, ನ್ಯಾಯಾಂಗಕ್ಕೆ ಸರ್ಕಾರ ಮಾಡುತ್ತಿರುವ ಅಪಚಾರ : ಶ್ರೀ ರಾಮಚಂದ್ರಾಪುರ ಮಠದಿಂದ‌ ಸಲ್ಲಿಕೆಯಾಯ್ತು ನ್ಯಾಯಾಂಗ ನಿಂದನೆ ಅರ್ಜಿ!

SHARE

ಮಾನ್ಯ ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಹೊರತಾಗಿಯೂ, ಉತ್ತರ ಕನ್ನಡದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತ ನಿರ್ವಹಣೆಯನ್ನು ಸರ್ಕಾರ ವಶಪಡಿಸಿಕೊಂಡಿದೆ. ಸರ್ಕಾರದ ಈ ಕ್ರಮ ಘನ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇದರ ವಿರುದ್ಧವಾಗಿ ಶ್ರೀಮಠ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ರಾಜ್ಯ ಉಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಶ್ರೀಮಠ ಸಲ್ಲಿಸಿದ್ದ ಅರ್ಜಿಯನ್ನು ಸೆ. 7 ರಂದು ಮಾನ್ಯ ಮಾಡಿದ್ದ ಸರ್ವೋಚ್ಚ ನ್ಯಾಯಾಲಯ ; ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಮುಂದುವರಿಸುವಂತೆ ಸೂಚಿಸಿ, ದೇವಾಲಯದ ಆಡಳಿತ ನಿರ್ವಹಣೆಯನ್ನು ಶ್ರೀಮಠವೇ ಮುಂದುವರಿಸುವಂತೆ ಮಧ್ಯಂತರ ಆದೇಶ ನೀಡಿತ್ತು.

ಮಾನ್ಯ ಸರ್ವೋಚ್ಚನ್ಯಾಯಾಲಯದ ಮಾನ್ಯ ಮುಖ್ಯನ್ಯಾಯಮೂರ್ತಿಗಳ ಆದೇಶವನ್ನೇ ಸರ್ಕಾರವೇ ಉಲ್ಲಂಘಿಸಿದರೆ ನ್ಯಾಯವನ್ನು ಎಲ್ಲಿ ಹುಡುಕುವುದು!?

ಶ್ರೀಮಠದ ಆಡಳಿತವು ಅಬಾಧಿತವಾಗಿ ಒಂದು ತಿಂಗಳು ಮುಂದುವರಿಯುವಂತೆ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದ ಮೂಲಕ; ಆ ಆದೇಶವೇ ಮುಂದುವರಿಯಬೇಕು ಎಂದು ಆದೇಶಿಸಿ, ಶ್ರೀಮಠಕ್ಕೆ ನೀಡಿದ ಕಾನೂನಿನ ರಕ್ಷಣೆ ಹೊರತಾಗಿಯೂ, ಕಾನೂನು ಬಾಹಿರವಾಗಿ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ವಶಕ್ಕೆ ಪಡೆದಿರುವ ಸರ್ಕಾರದ ಹೇಯ ಕ್ರಮ ನ್ಯಾಯಾಂಗಕ್ಕೆ ಸರ್ಕಾರಿ ವ್ಯವಸ್ಥೆ ಮಾಡುತ್ತಿರುವ ಅಪಚಾರ ವಾಗಿದ್ದು, ಈ ಕುರಿತಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಶ್ರೀಮಠ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದು, ಕ್ರಮಕ್ಕೆ ಆಗ್ರಹಿಸಿದೆ.