Home Local ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ.ಶಿರಸಿ ಇದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಶ್ರೀ...

ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ.ಶಿರಸಿ ಇದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಶ್ರೀ ಶಾಂತಾರಾಮ ವಿ. ಹೆಗಡೆ ಶೀಗೇಹಳ್ಳಿ

SHARE

ಶಿರಸಿ : ಸನ್ 2018-19ರಿಂದ 2022-23ರ ವರೆಗಿನ ಐದು ವರ್ಷಗಳ ಅವಧಿಗೆ ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ., ಶಿರಸಿ ಇದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಶ್ರೀ ಶಾಂತಾರಾಮ ವಿ. ಹೆಗಡೆ ಶೀಗೇಹಳ್ಳಿ ಹಾಗೂ ಉಪಾಧ್ಯಕ್ಷರಾಗಿ ಶ್ರೀ ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಪ್ರಧಾನ ಕಛೇರಿಯಲ್ಲಿ ಚುನಾವಣಾಧಿಕಾರಿಗಳಾದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀ ಎನ್. ಎನ್. ಹೆಗಡೆ ಇವರು ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆ ಜರುಗಿಸಿದರು. ಸಂಘದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ರವೀಶ ಹೆಗಡೆ ಅವರು ನೂತನ ಪದಾಧಿಕಾರಿಗಳಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಸೌಹಾರ್ದಯುತವಾಗಿ ಅವಿರೋಧ ಆಯ್ಕೆಗೆ ಸಹಕರಿಸಿದ ಆಡಳಿತ ಮಂಡಳಿ ನಿರ್ದೇಶಕರುಗಳಿಗೆ ಸಂಘದ ಅಧ್ಯಕ್ಷರಾದ ಶ್ರೀ ಶಾಂತಾರಾಮ ವೆಂ. ಹೆಗಡೆ, ಶೀಗೇಹಳ್ಳಿ ಹಾಗೂ ಉಪಾಧ್ಯಕ್ಷರಾದ ಶ್ರೀ ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ ಅವರು ಧನ್ಯವಾದ ತಿಳಿಸಿದ್ದಾರೆ.