Home Important ಕೋಲ್ಕತಾದ ವೈದ್ಯಕೀಯ ಕಾಲೇಜಿನಲ್ಲಿ ಭೀಕರ ಅಗ್ನಿ ದುರಂತ: 250 ಮಂದಿ ರಕ್ಷಣೆ.

ಕೋಲ್ಕತಾದ ವೈದ್ಯಕೀಯ ಕಾಲೇಜಿನಲ್ಲಿ ಭೀಕರ ಅಗ್ನಿ ದುರಂತ: 250 ಮಂದಿ ರಕ್ಷಣೆ.

SHARE

ಕೋಲ್ಕತಾ: ನಗರದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 250ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಗ್ನಿ ದುರಂತ ಸಂಭವಿಸುತ್ತಿದ್ದಂತೆಯೇ 10ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ ಎಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆ 7.30ರ ಸುಮಾರಿಗೆ ಘಟನೆ ನಡೆದಿದ್ದು,ಆಸ್ಪತ್ರೆಯ ಔಷಧಾಲಯ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಸುತ್ತಲೂ ವ್ಯಾಪಿಸಿದೆ ಎಂದು ತಿಳಿದುಬಂದಿದೆ.
ದಟ್ಟ ಹೊಗೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಯ ನಿರ್ವಹಣಾ ವಿಭಾಗದ ಸಿಬ್ಬಂದಿಗಳಿಗೆ ತಿಳಿದಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ನಂತರ ಆಸ್ಪತ್ರೆಯಲ್ಲಿದ್ದ 250ಕ್ಕೂ ಹೆಚ್ಚು ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಕೆಲವರು ಕಟ್ಟಡದಿಂದಲೇ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಎಂದು ತಿಳಿದುಬಂದಿದೆ.