Home Local ಕುಮಟಾ ಕರ್ನಾಟಕ ಬ್ಯಾಂಕ್ ನಲ್ಲಿ ಭಾರೀ ಬೆಂಕಿ ಅವಘಡ

ಕುಮಟಾ ಕರ್ನಾಟಕ ಬ್ಯಾಂಕ್ ನಲ್ಲಿ ಭಾರೀ ಬೆಂಕಿ ಅವಘಡ

SHARE

ಕುಮಟಾದ ಕರ್ನಾಟಕ ಬ್ಯಾಂಕ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

 

ಸಂಜೆ ಬ್ಯಾಂಕ್ ನ ಅವಧಿ ಮುಗಿದ ನಂತರ ಈ ಅವಘಡ ಸಂಭವಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಂಜೆ ಸುಮಾರು 7:30ಕ್ಕೆ ಈ ಬೆಂಕಿ ಅವಘಡ ಸಂಭವಿಸಿದೆ. ಬ್ಯಾಂಕ್ ನಲ್ಲಿದ್ದ ಕಡತಗಳು ಹಾಗೂ ವ್ಯಾವಹಾರಿಕ ಪತ್ರಗಳು ಅಗ್ನಿ ಅವಘಡದಲ್ಲಿ ಸುಟ್ಟು ಕರಕಲಾಗಿದೆ.

ಬ್ಯಾಂಕ್ ನ ಸ್ಟ್ರಾಂಗ್ ರೂಮ್ ಹೊರತುಪಡಿಸಿ ಉಳಿದೆಲ್ಲಾ ಭಾಗದಲ್ಲಿದ್ದ ವಸ್ತುಗಳೂ ಸುಟ್ಟಿವೆ. ಬ್ಯಾಂಕ್ ವ್ಯವಹಾರಗಳಿಗೆ ಬಳಸುತ್ತಿದ್ದ ಕಂಪ್ಯೂಟರ್ ಗಳು ಕರಗಿ ಹೋಗಿವೆ.

ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ.