Home Local ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ವಿಲಂಬ ಸಂವತ್ಸರದ ಶಿವಗಂಗಾ ವಿವಾಹ ಮಹೋತ್ಸವ ಸಂಪನ್ನ

ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ವಿಲಂಬ ಸಂವತ್ಸರದ ಶಿವಗಂಗಾ ವಿವಾಹ ಮಹೋತ್ಸವ ಸಂಪನ್ನ

SHARE

ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ವಿಲಂಬ ಸಂವತ್ಸರದ ಶಿವಗಂಗಾ ವಿವಾಹ ಮಹೋತ್ಸವವು ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಆಶ್ವೀಜ ಬಹುಳ ಚತುರ್ದಶಿ ದಿನ ವೈಭವದಿಂದ ಜರುಗಿತು .


ಶ್ರೀ ಕ್ಷೇತ್ರ ಗೋಕರ್ಣದ ವಿಶಾಲವಾದ ಮಹಾಬಲೇಶ್ವರ ಕಡಲ ತೀರದಲ್ಲಿ ಗೋಧೂಳಿ ಮುಹೂರ್ತದಲ್ಲಿ ಸಹಸ್ರಾರು ಭಕ್ತ ಜನರ ಸಮ್ಮುಖದಲ್ಲಿ ನಿಶ್ಚಯಿತ ವಧುವಾಗಿ ಬಂದ ಗಂಗಾಮಾತೆ ಜಗದೀಶ್ವರನನ್ನು ವಿವಾಹವಾದಳು.
ಕಡಲಿನ ಅಬ್ಬರ, ವಾದ್ಯಘೋಷ , ವೇದಘೋಷ, ವಿಶಿಷ್ಟ ತೋರಣ, ಗುಮಟೆಪಾಂಗ ಜಾನಪದ ಹಾಡುಗಳು ಉತ್ಸವಕ್ಕೆ ಮೆರುಗನ್ನು ನೀಡಿದವು. ಭಕ್ತರು ಆರತಿ ನೀಡಿ ದೇವದಂಪತಿಗಳನ್ನು ಬರಮಾಡಿಕೊಂಡರು .

ವಿವಾಹ ಮಹೋತ್ಸವದ ನಂತರ ಶಿವ -ಗಂಗೆಯರು ಶ್ರೀ ದೇವಾಲಯದ ‘ಅಮೃತಾನ್ನ’ ಭೋಜನ ಶಾಲೆಗೆ ಚಿತ್ತೈಸಿ ದೇವರಾಜೋಪಚಾರ ಪೂಜೆ ಸ್ವೀಕರಿಸಿದರು. ಆನಂತರ ಪ್ರಸಾದ ವಿತರಣೆ ನಡೆಯಿತು . ಉಪಾಧಿವಂತ ಮಂಡಲದ ಸದಸ್ಯರು, ಊರ ನಾಗರಿಕರು, ಎಲ್ಲ ಸಮಾಜದ ಬಂಧುಗಳು ಉಪಸ್ಥಿತರಿದ್ದರು .