Home Information 2018-19ನೇ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಲೇಖಕರಿಂದ ಅರ್ಜಿ ಆಹ್ವಾನ

2018-19ನೇ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಲೇಖಕರಿಂದ ಅರ್ಜಿ ಆಹ್ವಾನ

SHARE

ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2018-19ನೇ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಿದೆ.

ಪುಸ್ತಕಗಳ ಸಂಖ್ಯೆಗೆ ಅನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಠ 2 ಪ್ರಶಸ್ತಿಗಳನ್ನು ನೀಡಲಾಗುವುದು. ಆಯ್ಕೆಯಾದ ಲೇಖಕರಿಗೆ ರೂ.25 ಸಾವಿರಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುವುದು.

ಜ. 2017 ರಿಂದ ಡಿ. 2018 ರೊಳಗೆ ಕನ್ನಡದಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಈ ಪ್ರಶಸ್ತಿಗೆ ಸಲ್ಲಿಸಬಹುದಾಗಿದೆ. ಲೇಖಕರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಜನವರಿ 5, 2019 ರೊಳಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ. ಯು.ಆರ್. ರಾವ್ ವಿಜ್ಞಾನ ಭವನ, ಮೇಜರ್ ಸಂದೀಪ್ ಉನ್ನೀಕೃಷ್ಣನ್ ರಸ್ತೆ, ತೋಟಗಾರಿಕೆ ವಿಶ್ವವಿದ್ಯಾನಿಲಯದ ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಪೋಸ್ಟ್, ಯಲಹಂಕ, ಬೆಂಗಳೂರು -560097 ವಿಳಾಸಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ ವಿಳಾಸ www.kstacademy.inವೀಕ್ಷಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.