Home Information ರಾಜ್ಯ ಅಬಕಾರಿ ಇಲಾಖೆಯಲ್ಲಿ ಉಪ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ರಾಜ್ಯ ಅಬಕಾರಿ ಇಲಾಖೆಯಲ್ಲಿ ಉಪ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ.!

SHARE

ಬೆಂಗಳೂರು: ರಾಜ್ಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 59 ಉಪ ನಿರೀಕ್ಷಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ., ಪರಿಶಿಷ್ಟರಿಗೆ 300 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತಾ ಪರೀಕ್ಷೆಗಳೆರಡಲ್ಲೂ ಉತ್ತೀರ್ಣರಾದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 22 ತನಕ ಅವಕಾಶವಿದೆ.