Home Important ಹಿಂಗಾರು ಮಳೆ : ಕರಾವಳಿ ಪ್ರದೇಶಗಳು ಸೇರಿ ರಾಜ್ಯದಲ್ಲಿ ಮಳೆ ಆಗುವ ಸಾಧ್ಯತೆ..!

ಹಿಂಗಾರು ಮಳೆ : ಕರಾವಳಿ ಪ್ರದೇಶಗಳು ಸೇರಿ ರಾಜ್ಯದಲ್ಲಿ ಮಳೆ ಆಗುವ ಸಾಧ್ಯತೆ..!

SHARE

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಹಿಂಗಾರು ಚುರುಕಾಗಿದ್ದು, ಮಂಗಳವಾರದಿಂದ ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.ಇದರಿಂದ ರೈತರಿಗೆ ಸಂತಸ ತಂದಿದೆ.

ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ತುಂತುರು ಅಥವಾ ಸಾಧಾರಣ ಮಳೆ, ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.