Home Information ಪೆಥಾಯ್ ಚಂಡಮಾರುತ : ಮುಂದಿನ 2 ದಿನದಲ್ಲಿ ಭಾರೀ ಮಳೆ ಸಾಧ್ಯತೆ.

ಪೆಥಾಯ್ ಚಂಡಮಾರುತ : ಮುಂದಿನ 2 ದಿನದಲ್ಲಿ ಭಾರೀ ಮಳೆ ಸಾಧ್ಯತೆ.

SHARE

ಪೆಥಾಯ್ ಹೆಸರಿನ ಈ ಚಂಡಮಾರುತದ ಪರಿಣಾಮ ಆಂಧ್ರಪ್ರದೇಶದ ಕರಾವಳಿ ತೀರ ಹಾಗೂ ಉತ್ತರ ತಮಿಳನಾಡು ಮತ್ತು ಪುದುಚೇರಿ ಕರಾವಳಿ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಅಲ್ಲದೆ, ಆಂಧ್ರಪ್ರದೇಶದ ಒಂಗೊಲೆ ಹಾಗೂ ಕಾಕಿನಾಡ ನಡುವಿನ ಪ್ರದೇಶಗಳಲ್ಲಿ ಭಾರೀ ಭೂಕುಸಿತವಾಗುವ ಭೀತಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸದ್ಯ ಪ್ರತೀ ಗಂಟೆಗೆ 45-65 ಕಿ.ಮೀ ವೇಗವಾಗಿ ಬೀಸುತ್ತಿರುವ ಈ ಚಂಡಮಾರುತವು ಮುಂದಿನ 24 ಗಂಟೆಯಲ್ಲಿ ಮತ್ತಷ್ಟುತೀವ್ರತೆ ಪಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಈಗಾಗಲೇ ಗಜ ಚಂಡಮಾರುತದಿಂದ ಸಾಕಷ್ಟುಸಂಕಷ್ಟಅನುಭವಿಸಿರುವ ತಮಿಳುನಾಡು ರಾಜ್ಯಕ್ಕೆ ಇದೀಗ ಮತ್ತೊಂದು ಚಂಡ ಮಾರುತದ ಭೀತಿ ಎದುರಾಗಿದೆ ಎನ್ನಲಾಗಿದೆ.