Home Local ಶ್ರೀ ಶ್ರೀ ಪಟ್ಟದ ಚಿನ್ಮಯ ಸ್ವಾಮಿಗಳಿಗೆ ಗೋಕರ್ಣ ಗೌರವ

ಶ್ರೀ ಶ್ರೀ ಪಟ್ಟದ ಚಿನ್ಮಯ ಸ್ವಾಮಿಗಳಿಗೆ ಗೋಕರ್ಣ ಗೌರವ

SHARE
ಪ ಪೂ ಶ್ರೀ ಶ್ರೀ ಪಟ್ಟದ ಚಿನ್ಮಯ ಸ್ವಾಮಿಗಳು , ಶ್ರೀ ಗೋಣಿಬಸವೇಶ್ವರ ಸಂಸ್ಥಾನಮಠ, ದಾವಣಗೆರೆ   ಇವರು   ಶ್ರೀ ಕ್ಷೇತ್ರ ಗೋಕರ್ಣದ ಶ್ರೀ  ಮಹಾಬಲೇಶ್ವರ ದೇವಾಲಯದಲ್ಲಿ  ಜರುಗುತ್ತಿರುವ  “ಗೋಕರ್ಣ ಗೌರವ”  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು.  ಉದ್ಯಮಿ ಶ್ರೀ ಸುಬ್ರಾಯ ಪೈ ದಂಪತಿಗಳು   ದೇವಾಲಯದ  ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ,  ತಾಮ್ರಪತ್ರ  ಸ್ಮರಣಿಕೆ ನೀಡಿ, ಗೌರವಿಸಿದರು .  ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ  ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .