Home Information ನಾಳೆ ಕುಮಟಾದಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆ: 9 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಆಯೋಜನೆ.

ನಾಳೆ ಕುಮಟಾದಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆ: 9 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಆಯೋಜನೆ.

SHARE

ಕುಮಟಾ: ಬಾಲ ಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಕುಮಟಾ ಹಾಗೂ ಅರಣೋದಯ ಟ್ರಸ್ಟ್ (ರಿ) ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಫೆ. 5 ರಂದು ಮಧ್ಯಾಹ್ನ 3.00 ಗಂಟೆಗೆ ಪಟ್ಟಣದ ನಾದಶ್ರೀ ಕಲಾ ಕೇಂದ್ರದಲ್ಲಿ 9 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅರಣೋದಯ ಟ್ರಸ್ಟ್ ತಿಳಿಸಿದೆ.

ಮಾದರಿಯು ವಿಜ್ಞಾನಕ್ಕೆ ಸಂಬಂಧಿಸಿದ್ದಾಗಿದ್ದು, ಅದಕ್ಕೆ ಸಂಬಂಧಪಟ್ಟಂತೆ ಸ್ಪರ್ಧಾಳುಗಳು ವಿವರಗಳನ್ನು ನೀಡುವುದು ಹಾಗೂ ನಿರ್ಣಾಯಕರು ಕೇಳುವ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ. ಆಸಕ್ತರು ಮುಂಚಿತವಾಗಿ ನೋಂದಾಯಿಸಿಕೊಳ್ಳಲು ಕೋರಲಾಗಿದ್ದು, ಸ್ಪರ್ಧಾಳುಗಳಿಗೆ ಪ್ರವೇಶ ಉಚಿತವಾಗಿರುತ್ತದೆ. ಸ್ಪರ್ಧಾ ವಿಜೇತರಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನಗಳನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 08386-221330 ಈ ನಂಬರ್‍ ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.