Home Local ಟೆಂಪೋ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ: ಸ್ಥಳದಲ್ಲಿಯೇ ಇಬ್ಬರ ದುರ್ಮರಣ

ಟೆಂಪೋ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ: ಸ್ಥಳದಲ್ಲಿಯೇ ಇಬ್ಬರ ದುರ್ಮರಣ

SHARE

ಭಟ್ಕಳ: ಭಟ್ಕಳ ತಾಲೂಕಿನ ಬೈಲೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್ ಹಾಗೂ ಟೆಂಪೊ ನಡುವೆ ಸಂಭವಿಸಿದ ಪರಿಣಾಮ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಸ್ಕೂಟಿ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಟೆಂಪೊ ಮುಂಭಾಗಕ್ಕೆ ಹಾನಿಯಾಗಿದೆ. ಘಟನೆ ಬಳಿಕ ರಾಷ್ಟ್ರಿಯ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ಸಂಚಾರಕ್ಕೆ ವ್ಯತ್ಯಯವಾಗಿತ್ತು.

ಅಪಘಾತದಲ್ಲಿ ಟೆಂಪೊದಲ್ಲಿದ್ದ ಮಕ್ಕಳಿಬ್ಬರು ಸೇರಿ ಕೆಲವರಿಗೆ ಗಂಭೀರ ಗಾಯವಾಗಿದೆ. ಹೊನ್ನಾವರ ತಾಲೂಕಿನ ಮಂಕಿ ಗ್ರಾಮದ ಆಫ್ರಿನ್ ಮತ್ತು ಈಕೆಯ ಸಹೋದರ ಕೈಫ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಸಾಗಿಸಲಾಗಿದೆ.

ಈ ಬಗ್ಗೆ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.