Home Local ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಾತೆ ಮಹಾದೇವಿ ಲಿಂಗೈಕ್ಯ

ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಾತೆ ಮಹಾದೇವಿ ಲಿಂಗೈಕ್ಯ

SHARE

ಮಣಿಪಾಲ: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರು ಇಂದು ಮಧ್ಯಾಹ್ನ ಲಿಂಗೈಕ್ಯರಾಗಿದ್ದಾರೆ.

ಕಳೆದ ಎಂಟು ದಿನಗಳಿಂದ ನಗರದ ಮಣಿಪಾಲ್​ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾತೆ ಮಹಾದೇವಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಸುಮಾರು ಒಂದು ವರ್ಷದಿಂದ ಮೂತ್ರಪಿಂಡ ವಿಫಲವಾಗಿದ್ದು, ಡಯಾಲಿಸಿಸ್​ ಮಾಡಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚಿಗೆ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

74 ವರ್ಷದ ಮಾತೆ ಮಹಾದೇವಿ ಅವರು ದೀರ್ಘಕಾಲದಿಂದ ಮಧುಮೇಹ, ಗಂಭೀರ ಶ್ವಾಸಕೋಶ  ಹಾಗೂ ಮೂತ್ರಪಿಂಡದ ಸಮಸ್ಯೆ ಎದುರಿಸುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಮಾ. 8ರಂದು ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿದ್ದರು.

ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಾತೆ ಮಹಾದೇವಿ, ದೆಹಲಿಯಲ್ಲೂ ಪ್ರತಿಭಟನೆ ಮಾಡಿದ್ದರು.