Home Local ಕೊಂಕಣದಲ್ಲಿ ಶಾರದಾ ಪೂಜೆಯ ಸಂಭ್ರಮ

ಕೊಂಕಣದಲ್ಲಿ ಶಾರದಾ ಪೂಜೆಯ ಸಂಭ್ರಮ

SHARE

ಕುಮಟಾ: ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಈ ಸುಸಂದರ್ಭದಲ್ಲಿ ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಎಲ್ಲಾ ಅಂಗ ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 04-08-2017, ಶುಕ್ರವಾರದಂದು ಶ್ರೀ ಶಾರದಾ ಮತ್ತು ಶ್ರೀ ಮಹಾಲಕ್ಷ್ಮೀ ಪೂಜೆಯನ್ನು ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನೆರವೇರಿಸಿದರು. ವಿಶೇಷವಾಗಿ 10ನೇ ತರಗತಿಯ ವಿದ್ಯಾರ್ಥಿಗಳು ಪೂಜಾ ಪ್ರಾಂಗಣವನ್ನು ಸುಂದರವಾಗಿ ಅಲಂಕರಿಸಿರುವುದು ಎಲ್ಲರ ಗಮನವನ್ನು ಸೆಳೆಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಾಶೀನಾಥ ನಾಯಕ, ಗೌರವ ಕಾರ್ಯದರ್ಶಿಗಳಾದ ಶ್ರೀ ಮುರಳೀಧರ ಪ್ರಭು, ಜೊತೆ ಕಾರ್ಯದರ್ಶಿಗಳಾದ ಶ್ರೀ ಶೇಷಗಿರಿ ಶಾನಭಾಗ, ಶೈಕ್ಷಣಿಕ ಸಲಹೆಗಾರರಾದ ಶ್ರೀ ಆರ್.ಎಚ್.ದೇಶಭಂಡಾರಿ, ಎಲ್ಲಾ ಅಂಗ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಭಕ್ತಿಗೀತೆ ಕಾರ್ಯಕ್ರಮಗಳು ಜರುಗಿದವು.