Home Local ಉಲ್ಲಾಸ ನಾಯ್ಕ ಅವಿರೋಧವಾಗಿ ಆಯ್ಕೆ

ಉಲ್ಲಾಸ ನಾಯ್ಕ ಅವಿರೋಧವಾಗಿ ಆಯ್ಕೆ

SHARE

ಹೊನ್ನಾವರ: ತಾಲೂಕು ಪಂಚಾಯತಿಗೆ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಉಲ್ಲಾಸ ನಾಯ್ಕ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ತಾಲೂಕು ಪಂಚಾಯತಿ ಅಧ್ಯಕ್ಷರಾಗಿದ್ದ ಕಾಂಗ್ರೆಸ್‌ ನ ಅಣ್ಣಯ್ಯ ನಾಯ್ಕ ಅವರ ವಿರುದ್ದ ಸ್ಥಳಿಯ ಶಾಸಕರ ಸೂಚನೆಯ ಮೇರೆಗೆ ಮಂಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಶೇಖರ ಗೌಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ದೂರು ನೀಡಿ ರಾಜಿನಾಮೆಗೆ ಒತ್ತಾಯಿಸಿದ್ದರು. ಇದರಿಂದ ಮನನೊಂದ ಅಣ್ಣಯ್ಯ ನಾಯ್ಕ ಕಳೆದ ಮೂರು ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಶುಕ್ರವಾರ ತಾ.ಪಂ.ಸಭಾಭವನದಲ್ಲಿ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಉಲ್ಲಾಸ ನಾಯ್ಕ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು.