Home Important ಹಿರಿಯ ನಟಿ ಬಿ.ವಿ. ರಾಧಾ ಹೃದಯಾಘಾತದಿಂದ ನಿಧನ

ಹಿರಿಯ ನಟಿ ಬಿ.ವಿ. ರಾಧಾ ಹೃದಯಾಘಾತದಿಂದ ನಿಧನ

SHARE

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ವಿ. ರಾಧಾ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಬಿ.ವಿ.ರಾಧ ಅವರಿಗೆ 69 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಯಾಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ಇಂದು ಬೆಳಗಿನ ಜಾವ 3.30 ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಬಿ.ವಿ ರಾಧಾ ಅವರು ಹಿರಿಯ ನಟ ಹಾಗೂ ನಿರ್ದೇಶಕ ಕೆ.ಎಸ್.ಎಲ್ ಸ್ವಾಮಿ ಅವರ ಪತ್ನಿ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ತೆಲುಗು, ಮಲಾಯಾಳಂ, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ನಟಿಸಿದ್ದಾರೆ.