Home Local ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳಿಗೆ “ಗೋಕರ್ಣ ಗೌರವ”

ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳಿಗೆ “ಗೋಕರ್ಣ ಗೌರವ”

SHARE
ಗೋಕರ್ಣ : ಪ ಪೂ ಡಾ ಶ್ರೀ ಶ್ರೀ ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು , ಅರಮನೆ ಜಪದಕಟ್ಟೆಮಠ , ಮೈಸೂರು  ಇವರು  ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ  “ಗೋಕರ್ಣ ಗೌರವ”  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .
 
ಗ್ರಾ ಪಂ ಮಾಜಿ ಸದಸ್ಯ, ಉದ್ದಿಮೆದಾರ ಶ್ರೀ ಮಂಜುನಾಥ ಶೆಟ್ಟಿ ಇವರು   ದೇವಾಲಯದ  ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ,  ತಾಮ್ರಪತ್ರ  ಸ್ಮರಣಿಕೆ ನೀಡಿ, ಗೌರವಿಸಿದರು.  ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ವಿಶ್ವನಾಥ ಭಟ್ ಭಟ್ ಇವರು  ಪೂಜಾ ಕೈಂಕರ್ಯ ನೆರವೇರಿಸಿದರು .