Home Important ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ

SHARE
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಹುತಾತ್ಮರಾಗಿರುವುದಾಗಿ ಶುಕ್ರವಾರ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಆರ್’ಎಸ್ ಪುರ ಸೆಕ್ಟರ್ ಬಳಿಯಿರುವ ಅರ್ನಿಯಾ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಯೋಧ ಬ್ರಿಜೇಂದ್ರ ಬಹದ್ದೂರ್ ಸಿಂಗ್ ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ.
ಇಂದು ಬೆಳಿಗ್ಗೆ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸಿದೆ. ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಸೇನೆ ಶೆಲ್, ಸಣ್ಣ ಹಾಗೂ ಸ್ವಯಂ ಚಾಲಿತ ಶಸ್ತ್ರಾಸ್ತ್ರಗಳ ಮುಖಾಂತರ ಅರ್ನಿಯಾ ಸೆಕ್ಟರ್ ಬಳಿಯಿರುವ ಬಿಎಸ್ಎಫ್ ಸೇನಾ ಕೇಂದ್ರಗಳ ಮೇಲೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಗಡಿಯಲ್ಲಿ ಪಾಕಿಸ್ತಾನ ಹಾಗೂ ಭಾರತೀಯ ಸೇನೆಗಳ ನಡುವಿನ ಗುಂಡಿನ ಕಾಳಗ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ