Home Important ನಾಡಹಬ್ಬ 407ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜು

ನಾಡಹಬ್ಬ 407ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜು

SHARE

ಮೈಸೂರು: : ಮಳೆ ಆತಂಕದ ನಡುವೆ ನಾಡಹಬ್ಬ 407ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜುಗೊಂಡಿದೆ. ಶನಿವಾರ ಮಧ್ಯಾಹ್ನ 2.15ರ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ಹೊರಡಲಿದೆ. ಮಧ್ಯಾಹ್ನ 4.45ರ ಶುಭ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ಇತರ ಗಣ್ಯರು ದಸರಾ ಗಜಪಡೆ ಸಾರಥಿ ಅರ್ಜುನ ಹೊತ್ತು ತರುವ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿನ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ನಂದಿಧ್ವಜ, ನಿಶಾನೆ ಆನೆ ಬಲರಾಮ, ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆ ಪ್ರತಿಬಿಂಬಿಸುವ 40 ಸ್ತಬಟಛಿಚಿತ್ರಗಳು ಹಾಗೂ 40 ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ. ಈ ವರ್ಷ ಜಂಬೂಸವಾರಿ ಮೆರವಣಿಗೆಯನ್ನು ದೆಹಲಿಯ ಗಣರಾಜ್ಯೋತ್ಸವ ಪರೇಡ್‌ ಮಾದರಿಯಲ್ಲಿ ಅತ್ಯಂತ ಶಿಸ್ತುಬದಟಛಿವಾಗಿ ಮಾಡಲು ಸಿದಟಛಿತೆ ನಡೆಸಲಾಗಿದೆ.

ಪಂಜಿನ ಕವಾಯತು: 
ರಾತ್ರಿ 8ಕ್ಕೆ ಬನ್ನಿಮಂಟಪ ಮೈದಾನದಲ್ಲಿ ಆಕರ್ಷಕ ಪಂಜಿನ ಕವಾಯತು ನಡೆಯಲಿದೆ. ರಾಜ್ಯಪಾಲ ವಾಲಾ ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಸಚಿವ ತನ್ವೀರ್‌ಸೇಟ… ಮತ್ತಿತರರು ಉಪಸ್ಥಿತರಿರುವರು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಕಾಯಂ ಸಿಸಿ ಕ್ಯಾಮರಾಗಳ ಜತೆಗೆ ತಾತ್ಕಾಲಿಕವಾಗಿ ಇನ್ನೂ 66 ಕ್ಯಾಮರಾ ಅಳವಡಿಸಲಾಗಿದೆ. ಅಲ್ಲದೆ, ಡ್ರೋಣ್‌ ಕ್ಯಾಮರಾದ ಮೂಲಕ ಇಡೀ ಜಂಬೂಸವಾರಿ ಮೆರವಣಿಗೆ ಮೇಲೆ ಹದ್ದಿನ ಕಣ್ಣಿಡಲಾಗುತ್ತಿದೆ.