Home Local “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ಶಿವಕುಮಾರ ಸ್ವಾಮಿಗಳು

“ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ಶಿವಕುಮಾರ ಸ್ವಾಮಿಗಳು

SHARE

ಪ ಪೂ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು , ಶೃದ್ಧಾನಂದಮಠ, ಕೊಪ್ಪಳ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಉಪಾಧಿವಂತ ಮಂಡಳಿ ಸದಸ್ಯ ವೇ ನರಸಿಂಹ ಉಗ್ರು ಭಟ್ ಇವರು ದೇವಾಲಯದ ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ಮಹಾಬಲೇಶ್ವರ ಭಟ್ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .