Home Local ಶಿರಸಿಯಲ್ಲಿ ಸಾಮಾಜಿಕ ಜಾಲತಾಣದ ಬಗ್ಗೆ ಮಾಹಿತಿ ಕಾರ್ಯಾಗಾರ!

ಶಿರಸಿಯಲ್ಲಿ ಸಾಮಾಜಿಕ ಜಾಲತಾಣದ ಬಗ್ಗೆ ಮಾಹಿತಿ ಕಾರ್ಯಾಗಾರ!

SHARE

ಶಿರಸಿ: ಉತ್ತರ ಕನ್ನಡ ಜಿಲ್ಲಾ ಯುವಮೋರ್ಚಾ ವತಿಯಿಂದ ಅ.7ರ ಬೆಳಿಗ್ಗೆ 11-00 ಗಂಟೆಗೆ ಶಿರಸಿಯ ಎ.ಪಿ.ಎಂ.ಸಿ ರೈತ ಭವನದಲ್ಲಿ ಒಂದು ದಿನದ ಸಾಮಾಜಿಕ ಜಾಲತಾಣಗಳ ಬಗ್ಗೆ ಮಾಹಿತಿ ಕಾರ್ಯಾಗಾರ ವನ್ನು ಆಯೋಜಿಸಲಾಗಿದೆ.
ಜಿಲ್ಲಾ ಯುವಮೋರ್ಚಾದ ಎಲ್ಲಾ ಸದಸ್ಯರಿಗೆ ಮತ್ತು ಮಹಿಳಾ ಮೊರ್ಚಾದ ಪ್ರಮುಖರಿಗೆ ಹಾಗೂ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣದ ಬಗ್ಗೆ ಸಕ್ರಿಯರಾಗಿರುವ ಪಕ್ಷದ ಕಾರ್ಯಕರ್ತರಿಗೆ ಇಲ್ಲಿ ಅವಕಾಶವಿದೆ.

ಪ್ರಧಾನಿ ನರೇಂದ್ರ ಮೋದಿಯವರ ಡಿಜಿಟಲ್ ಇಂಡಿಯಾ ಸಾಕಾರಗೊಳಿಸುವ ದೃಷ್ಟಿಯಿಂದ ಮತ್ತು ಕೇಂದ್ರ ಸರ್ಕಾರದ ಯೊಜನೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡುವಲ್ಲಿ ಈ ಕಾರ್ಯಾಗಾರ ನೆರವಾಗುತ್ತದೆ ಎಂದು ಜಿಲ್ಲಾ ಯುವಮೋರ್ಚಾದ ಪ್ರಮುಖರಾದ ರವೀಶ ಹೆಗಡೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.