Home Local ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳಿಗೆ “ಗೋಕರ್ಣ ಗೌರವ”

ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳಿಗೆ “ಗೋಕರ್ಣ ಗೌರವ”

SHARE
ಪ ಪೂ  ಶ್ರೀ ಶ್ರೀ  ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳು , ಶ್ರೀ ರೇವಣಸಿದ್ಧೇಶ್ವರಮಠ , ಬೀದರ   ಇವರು   ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ  “ಗೋಕರ್ಣ ಗೌರವ”  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ತುಂಬ ಚಟುವಟಿಕೆಯುಳ್ಳ  ೮೨ ವರ್ಷದ ಹಿರಿಯ  ಸ್ವಾಮೀಜಿಯವರು  ಆಗಮ ವಿದ್ವಾನ್  ಪದವಿ ಹೊಂದಿರುತ್ತಾರೆ . 
 
 ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ  ಇವರು  ದೇವಾಲಯದ   ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ,  ತಾಮ್ರಪತ್ರ  ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು .  ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ವಿಶ್ವನಾಥ ಭಟ್ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .