Home Local ಕಾರ-ಬಸ್ ನಡುವೆ ಮುಖಾಮುಖಿ ಡಿಕ್ಕಿ: ಕಾರವಾರದಲ್ಲಿ ದುರ್ಘಟನೆ

ಕಾರ-ಬಸ್ ನಡುವೆ ಮುಖಾಮುಖಿ ಡಿಕ್ಕಿ: ಕಾರವಾರದಲ್ಲಿ ದುರ್ಘಟನೆ

SHARE

ಕಾರವಾರ : ಕಾರು ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿ ಕಾರನಲ್ಲಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೈತ್ಕೂಲ್ ಬಳಿ ಸಂಭವಿಸಿದೆ‌.

ಗೋವಾ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಕಾರನಲ್ಲಿ ಇದ್ದ ಇಬ್ಬರಿಗೆ ಗಂಭೀರ ಪೆಟ್ಟಾಗಿದೆ.

ಕಾರ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಕಾರವಾರ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಕಾರವಾರ ಟೌನ್ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.