Home Local ಆತ್ಮಲಿಂಗ ಪೂಜೆ ನೆರವೇರಿಸಿದ ಶ್ರೀ ಶ್ರೀ ಶರಣಯ್ಯ ಸ್ವಾಮಿಗಳು!

ಆತ್ಮಲಿಂಗ ಪೂಜೆ ನೆರವೇರಿಸಿದ ಶ್ರೀ ಶ್ರೀ ಶರಣಯ್ಯ ಸ್ವಾಮಿಗಳು!

SHARE

ಪ ಪೂ ಶ್ರೀ ಶ್ರೀ ಶರಣಯ್ಯ ಸ್ವಾಮಿಗಳು , ಪೂರ್ಣಾನಂದಮಠ , ಬೆಳಗಾವಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಇವರು ದೇವಾಲಯದ ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ಲಕ್ಷ್ಮೀನಾರಾಯಣ ಜಂಭೆ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .