Home Local ಕಾರವಾರ ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ

ಕಾರವಾರ ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ

SHARE

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವವು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ನಡೆಯಿತು.

ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಕಾರ್ಯಕ್ರಮವನ್ನು ಉದ್ಘಾಟಿಸಿ, ರಾಣಿ ಚೆನ್ನಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಶಿಕ್ಷಕ ವಾಸುದೇವ ನಾಯ್ಕ ಕಿತ್ತೂರು ರಾಣಿ ಚೆನ್ನಮ್ಮರ ಕುರಿತು ಉಪನ್ಯಾಸ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಮಕೃಷ್ಣ ನಾಯಕ, ಕಾರವಾರ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಪಿ.ಕೆ.ಪ್ರಕಾಶ ಉಪಸ್ಥಿತರಿದ್ದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.