Home Information ನರ್ಸಿಂಗ್ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ನರ್ಸಿಂಗ್ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

SHARE

ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸ್ತಕ ಸಾಲಿನಲ್ಲಿ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನಿಸಿದೆ.

ಜಿಲ್ಲೆಯ ನರ್ಸಿಂಗ್ ಕಾಲೇಜುಗಳಲ್ಲಿ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕೊರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ) ಜನಾಂಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವ್ಹಂಬರ 30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08382-220336 ನ್ನು ಹಾಗೂ ಜಿಲ್ಲಾಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು.