Home Local ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದ ಶ್ರೀ ಬಸವರಾಜ ಸ್ವಾಮಿಗಳು.

ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದ ಶ್ರೀ ಬಸವರಾಜ ಸ್ವಾಮಿಗಳು.

SHARE

ಪ ಪೂ ಶ್ರೀ ಶ್ರೀ ಬಸವರಾಜ ಸ್ವಾಮಿಗಳು, ಶಿವಾನಂದಮಠ, ಮುಧೋಳ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಉಪಾಧಿವಂತ ಮಂಡಳಿ ಸದಸ್ಯ ವೇ ರಾಮಚಂದ್ರ ಜಂಭೆ ಇವರು ದೇವಾಲಯದ ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .