Home Local ಆತ್ಮಲಿಂಗ ಪೂಜೆ ನೆರವೇರಿಸಿದ ಶ್ರೀ ಶ್ರೀ ಮಹಾದೇವಿ ತಾಯಿ, ಶಿವಾನಂದಮಠ

ಆತ್ಮಲಿಂಗ ಪೂಜೆ ನೆರವೇರಿಸಿದ ಶ್ರೀ ಶ್ರೀ ಮಹಾದೇವಿ ತಾಯಿ, ಶಿವಾನಂದಮಠ

SHARE

ಪ ಪೂ ಶ್ರೀ ಶ್ರೀ ಮಹಾದೇವಿ ತಾಯಿ, ಶಿವಾನಂದಮಠ , ಮುಧೋಳ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಕುಮಟಾ ತಾ ಪಂ ಅಧ್ಯಕ್ಷೆ ಶ್ರೀಮತಿ ವಿಜಯಾ ಪಟಗಾರ ಇವರು ದೇವಾಲಯದ ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ, ತಾ ಪಂ ಸದಸ್ಯ ಶ್ರೀ ಮಹೇಶ ಶೆಟ್ಟಿ ದಂಪತಿಗಳು , ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ಲಕ್ಷ್ಮೀನಾರಾಯಣ ಜಂಭೆ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .