Home Local ಗೋವಾ ಮದ್ಯ ಸಾಗಿಸುತ್ತಿದ್ದ ಆರೋಪಿ ಅಂದರ್!

ಗೋವಾ ಮದ್ಯ ಸಾಗಿಸುತ್ತಿದ್ದ ಆರೋಪಿ ಅಂದರ್!

SHARE

ಕಾರವಾರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 90,720 ರೂ. ಮೌಲ್ಯದ ಗೋವಾ ಮದ್ಯವನ್ನು ಗ್ರಾಮೀಣ ಠಾಣೆಯ ಪೊಲೀಸರು ವಶ ವಶಪಡಿಸಿಕೊಂಡಿರುವ ಘಟನೆ ಇಲ್ಲಿನ ಅರಗಾ ನೇವಲ್ ಬೇಸ್ ಬಳಿ ನಡೆದಿದೆ.

ಕಾರಿನಲ್ಲಿ ಅನಧಿಕೃತವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿ ಶಿರವಾಡದ ನಾಗೇಶ ವಡ್ಡರ್ ಎಂಬುವವನ್ನು ಬಂಧಿಸಲಾಗಿದೆ. ಈತ ಸುಮಾರು 21 ಚೀಲಗಳಲ್ಲಿ ಗೋವಾ ರಾಜ್ಯದ ಮದ್ಯದ ಬಾಟಲಿಗಳನ್ನು ಕಾರಿನಲ್ಲಿ ಇರಿಸಿಕೊಂಡು ಸಾಗಿಸುತ್ತಿದ್ದ. ಈ ವೇಳೆ ಸಿಪಿಐ ಶಿವಕುಮಾರ್ ನೇತೃತ್ವದ ತಂಡ ಹೆದ್ದಾರಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಇದು ಪತ್ತೆಯಾಗಿದೆ.ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.