Home Local ದಾಂಡೇಲಿ: ನೂತನ ಬಸ್ ನಿಲ್ದಾಣ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದಾಂಡೇಲಿ: ನೂತನ ಬಸ್ ನಿಲ್ದಾಣ ಗ್ರಾಮ ಪಂಚಾಯಿತಿಗೆ ಹಸ್ತಾಂತರ

SHARE

ದಾಂಡೇಲಿ : ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನೂತನವಾಗಿ ನಿರ್ಮಿಸಿದ್ದ ಬಸ್ ನಿಲ್ದಾಣವನ್ನು ಅಂಬೇವಾಡಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿತು.
ನಗರದ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ತನ್ನ ಸಾಮಾಜಿಕ ಹೊಣೆಗಾರಿಕೆಯಡಿ ತಾಲೂಕಿನ ಅಂಬೇವಾಡಿಯಲ್ಲಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣವನ್ನು ಅಂಬೇವಾಡಿ ಗ್ರಾಮ ಪಂಚಾಯತಿಗೆ ಹಸ್ತಾಂತರಿಸಿದೆ.

ಸಂಸ್ಥೆಯು ತನ್ನ ಸಾಮಾಜಿಕ ಹೊಣೆಗಾರಿಕೆಯಿಂದ ಈಗಾಗಲೇ 2 ಬಸ್ ನಿಲ್ದಾಣಗಳನ್ನು ನಿರ್ಮಾಣಮಾಡಿದೆ. ನಗರ ಹಾಗೂ ನಗರದ ಸುತ್ತಮುತ್ತಲ ಅಭಿವೃದ್ಧಿಗೆ ಕಾರ್ಖಾನೆ ಸೇವೆಯನ್ನು ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಹೆಚ್ಚಾಗಲಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಜೈನ್ ಹೇಳಿದರು.

ಸಮಾರಂಭದಲ್ಲಿ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ಜಿ. ಗಿರಿರಾಜ್, ರವಿ ಗೌತಂ, ರಾಜೇಶ್ ತಿವಾರಿ, ತಾಲೂಕು ಪಂಚಾಯ್ತಿ ಸದಸ್ಯ ಬಾಲು ಪಾಟೀಲ, ಅಂಬೇವಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಾಗುಬಾಯಿ ಪಗಾಡೆ, ಸದಸ್ಯರುಗಳಾದ ಬಿ.ಎಲ್.ಲಮಾಣಿ, ವಸಂತ ಗಾವಡ, ಗಜಾನನ ಗಾವಡ ಮೊದಲಾದವರು ಉಪಸ್ಥಿತರಿದ್ದರು.