Home Local ಕಾರವಾರದಲ್ಲಿ ಕಣ್ಣೊಡೆದಿದೆ ಹೊಸ ಸಂಘಟನೆ! ಚುನಾವಣಾ ಅಖಾಡಕ್ಕೆ ಹೊಸ ಮುಖ.

ಕಾರವಾರದಲ್ಲಿ ಕಣ್ಣೊಡೆದಿದೆ ಹೊಸ ಸಂಘಟನೆ! ಚುನಾವಣಾ ಅಖಾಡಕ್ಕೆ ಹೊಸ ಮುಖ.

SHARE

ಕಾರವಾರ: ಮುಂದಿನ ವಿಧಾನಸಭಾ ಚುನಾವಣೆಗೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯಿಂದ ಅಭ್ಯರ್ಥಿಯನ್ನು ನಿಲ್ಲಿಸುವುದಾಗಿ ಸಂಘಟನೆಯ ಜಿಲ್ಲಾಧ್ಯಕ್ಷ ಎಲಿಷಾ ಎಲಕಪಾಟಿ ತಿಳಿಸಿದರು.

ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಾಕ್ಷ ಡಾ.ಎಂ.ವೆಂಕಟಸ್ವಾಮಿ, ಸಂಘಟನೆಯ ಜಿಲ್ಲಾಧ್ಯಕ್ಷ ಎಲಿಷಾ ಎಲಕಪಾಟಿಯವರನ್ನೇ ಮುಂದಿನ ಚುನಾವಣೆಗೆ ಕಾರವಾರ- ಅಂಕೋಲಾ ಕ್ಷೇತ್ರಕ್ಕೆ ಸಂಘಟನೆಯ ವತಿಯಿಂದ ನಿಲ್ಲಿಸಲು ಈಗಾಗಲೇ ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತಿದೆ. ಜಿಲ್ಲೆಯಲ್ಲಿಯೂ ಕೂಡ ಎಲ್ಲ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತದೆ. ಹಳಿಯಾಳ ಕ್ಷೇತ್ರದಿಂದ ಇಮ್ತಿಯಾಜ್ ಅವರನ್ನಿ ಕಣಕ್ಕೆ ಇಳಿಸುತ್ತಿದ್ದೇವೆ. ಇನ್ನು ಒಂದು ತಿಂಗಳಲ್ಲಿ ಎಲ್ಲ ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದರು.

ಸಂಘಟನೆಯ ವತಿಯಿಂದ ರಾಜ್ಯದ ಇಪ್ಪತ್ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಜನವರಿ ಇಪ್ಪತ್ತಾರರಿಂದ ಜನಾದೇಶಕ್ಕಾಗಿ ಜನಸಂಕಲ್ಪ ಜಾಥಾವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದೂ ತಿಳಿಸಿದರು.