Home Local “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ಷ ಬ್ರ ಕಾಶೀನಾಥ ಶಿವಾಚಾರ್ಯ ಮಹಾಸ್ವಾಮಿಗಳು

“ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ಷ ಬ್ರ ಕಾಶೀನಾಥ ಶಿವಾಚಾರ್ಯ ಮಹಾಸ್ವಾಮಿಗಳು

SHARE

ಗೋಕರ್ಣ : ಪ ಪೂ ಶ್ರೀ ಷ ಬ್ರ ಕಾಶೀನಾಥ ಶಿವಾಚಾರ್ಯ ಮಹಾಸ್ವಾಮಿಗಳು , ಶ್ರೀ ಸಿದ್ಧಾರೂಢಮಠ , ಕಲಘಟಗಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .
ವೇ ರಾಮಚಂದ್ರ ಜಂಭೆ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ವಿಶ್ವನಾಥ ಭಟ್ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .