Home Local “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು.

“ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು.

SHARE

ಗೋಕರ್ಣ : ಶ್ರೀ ಮ ನಿ ಪ್ರ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಅಲ್ಲಮಪ್ರಭುದೇವರ ಮಠ, ಗದಗ, ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಉಪಾಧಿವಂತ ಮಂಡಳಿ ಸದಸ್ಯ ವೇ. ಮಹಾಬಲೇಶ್ವರ ನಾರಾಯಣ ಚಿತ್ರಿಗೆಮಠ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು