Home Local ಹೊನ್ನಾವರದ ಮಂಕಿಯಲ್ಲಿ ಟ್ಯಾಂಕರ್ ಪಲ್ಟಿ : ಸ್ವಲ್ಪದರಲ್ಲಿ‌ ತಪ್ಪಿತು ಅನಾಹುತ.

ಹೊನ್ನಾವರದ ಮಂಕಿಯಲ್ಲಿ ಟ್ಯಾಂಕರ್ ಪಲ್ಟಿ : ಸ್ವಲ್ಪದರಲ್ಲಿ‌ ತಪ್ಪಿತು ಅನಾಹುತ.

SHARE

ಹೊನ್ನಾವರ :ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಹೊನ್ನಾವರ ತಾಲೂಕಿನ ಮಂಕಿ ಬಳಿ ನಡೆದಿದೆ.ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಈ ಘಟನೆ ಸಂಭವಿಸಿದ್ದು ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಇದಾಗಿತ್ತು.

ಹೆಚ್ ಪಿ ಕಂಪನಿಗೆ ಸೇರಿದ ಟ್ಯಾಂಕರ್ ಇದಾಗಿದ್ದು
ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ನಡೆದ ಘಟನೆ ನಡೆದಿದೆ.
ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ಯಾಂಕರ್ ಪಲ್ಟಿಯಾದ ಕೆಲಕಾಲ ಜನ ಭಯಭೀತರಾಗಿದ್ದು ಸದ್ಯ ಪರಿಸ್ಥಿತಿ ತಿಳಿಯಾಗಿದೆ.