Home Local ಯಲ್ಲಾಪುರ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಯಲ್ಲಾಪುರ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

SHARE

ಯಲ್ಲಾಪುರ: ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿ ಸಾರಾಯಿ ಪ್ಯಾಕೇಟ್ ಗಳನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಗುಳ್ಳಾಪುರದ ಜನತಾ ಕಾಲನಿಯಲ್ಲಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಯಲ್ಲಾಪುರ ಪೊಲೀಸರು ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ಅನಂತ ದೇವಪ್ಪ ಬಾಂದಿ(29) ಎನ್ನುವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 81 ಸಾರಾಯಿ ಪ್ಯಾಕೇಟ್ ವಶಪಡಿಸಿಕೊಂಡಿದ್ದಾರೆ.

ಸಾರಾಯಿ ಪ್ಯಾಕೇಟ್ ಗಳನ್ನು ಯಲ್ಲಾಪುರದಿಂದ ತಂದು ಗುಳ್ಳಾಪುರದ ತನ್ನ ಮನೆಯಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡ ಸಾರಾಯಿ ಮೌಲ್ಯ 4500 ರೂ. ಎಂದು ಅಂದಾಜಿಸಲಾಗಿದೆ.

ಸಿ.ಪಿ.ಐ ಡಾ.ಮಂಜುನಾಥ ನಾಯಕ ಹಾಗೂ ಪಿ.ಎಸ್ ಐ ಲಕ್ಕಪ್ಪ ನಾಯ್ಕ ಮಾರ್ಗದರ್ಶನದಲ್ಲಿ ಎ.ಎಸ್.ಐ ನಾರಾಯಣ ರಾಥೋಡ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.