Home Local ಯೋಗೇಶ್ ಗೌಡ ಕೊಲೆ ಪ್ರಕರಣ ; ವಿನಯ ಕುಲಕರ್ಣಿ ರಾಜೀನಾಮೆಗೆ ಬಿಜೆಪಿ ಆಗ್ರಹ

ಯೋಗೇಶ್ ಗೌಡ ಕೊಲೆ ಪ್ರಕರಣ ; ವಿನಯ ಕುಲಕರ್ಣಿ ರಾಜೀನಾಮೆಗೆ ಬಿಜೆಪಿ ಆಗ್ರಹ

SHARE

ಕಾರವಾರ : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ವಿನಯ ಕುಲಕರ್ಣಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.

ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು, ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ ಕುಲಕರ್ಣಿ ಹೆಸರು ಕೇಳಿಬರುತ್ತಿದೆ. ಅಲ್ಲದೇ ಸಚಿವರು ಹಂತಕರ ರಕ್ಷಣೆಗೆ ಮುಂದಾಗಿದ್ದು ಕೊಲೆಯಾದ ಯೋಗೀಶ್ ಗೌಡರ ವಕೀಲ ಅನಂದಗೆ ಸಚಿವ ಕುಲಕರ್ಣಿ ಬೆದರಿಕೆ ಕೂಡಾ ಹಾಕಿದ್ದಾರೆ. ಈ ಧ್ವನಿ ಸುರುಳಿ ಎಲ್ಲೆಡೆ ಪ್ರಚಾರದಲ್ಲಿದೆ. ಗೌಡರ ಕುಟುಂಬ ನ್ಯಾಯಕ್ಕಾಗಿ ಮೊರೆ ಇಡುತ್ತಿದ್ದರು ಸರ್ಕಾರ ಇವರ ಅಹವಾಲನ್ನು ಕೇಳುತ್ತಿಲ್ಲ, ಬದಲಿಗೆ ಸಚಿವರ ರಕ್ಷಣೆಗೆ ಎಂದು ಆರೋಪಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಸುನೀಲ್ ಹೆಗಡೆ, ಜೆ.ಡಿ.ನಾಯ್ಕ, ರೂಪಾಲಿ ನಾಯ್ಕ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.