Home Local ಶ್ರೀ ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಗೌರವ

ಶ್ರೀ ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಗೌರವ

SHARE

ಪ. ಪೂ.ಶ್ರೀ ಮ.ಘ.ಚ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ರಾಮದುರ್ಗ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ದೆಹಲಿಯಲ್ಲಿ ಅಧ್ಯಾಪಕರಾಗಿ ನಿವೃತ್ತರಾದ ಶ್ರೀ ಶಂಕರ ರಾಮ ಗಾಯತ್ರಿ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ವೇ. ವಿಶ್ವನಾಥ್ ಭಟ್ ಬಾಳೆಹಿತ್ಲು ಪೂಜಾ ಕೈಂಕರ್ಯ ನೆರವೇರಿಸಿದರು