Home Local ಜಾತ್ಯಾತೀತ ಜನತಾದಳದ ಕಾರ್ಯಕರ್ತರ ಸಭೆ ನಾಳೆ

ಜಾತ್ಯಾತೀತ ಜನತಾದಳದ ಕಾರ್ಯಕರ್ತರ ಸಭೆ ನಾಳೆ

SHARE

ಶಿರಸಿ: ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದ ಬನವಾಸಿ ಘಟಕದ ಉಂಚಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಜಾತ್ಯಾತೀತ ಜನತಾದಳದ ಕಾರ್ಯಕರ್ತರ ಸಭೆಯನ್ನು ನ.29ರ ಸಾಯಂಕಾಲ 5.00 ಗಂಟೆಗೆ ಉಂಚಳ್ಳಿ ಗ್ರಾಮ ಪಂಚಾಯತ ಕಾರ್ಯಾಲಯದ ಹತ್ತಿರ ಸಂಘಟಿಸಲಾಗಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಕ್ಷದ ಸಂಘಟನೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿ ಕುರಿತು ಹಾಗೂ ಅರಣ್ಯ ಅತಿಕ್ರಮಣದಾರರ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದೆಂದು ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದ ಪಕ್ಷದ ಸಂಘಟನೆ ಉಸ್ತುವಾರಿ ಎ.ರವೀಂದ್ರ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.