Home Local ಚುನಾವಣೆ ಸಂಬಂಧಿಸಿದ ದೂರುಗಳಿಗೆ ಟೋಲ್ ಫ್ರೀ ಕೇಂದ್ರ.

ಚುನಾವಣೆ ಸಂಬಂಧಿಸಿದ ದೂರುಗಳಿಗೆ ಟೋಲ್ ಫ್ರೀ ಕೇಂದ್ರ.

SHARE

ಕಾರವಾರ: ಮತದಾರರ ಪಟ್ಟಿ ಪರಷ್ಕರಣೆ ಹಾಗೂ ಚುನಾವಣೆ ವಿಷಯಕ್ಕೆ ಸಂಬಂಧಪಟ್ಟಂತೆ ದೂರುಗಳನ್ನು ಸ್ವೀಕರಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ದೂರವಾಣಿ ಸಂಖ್ಯೆ 1077(ಟೋಲ್ ಫ್ರೀ) ಆಗಿದ್ದು 24*7 ಕಾರ್ಯನಿರತವಾಗಿರುತ್ತದೆ.

ದೂರು ಸ್ವೀಕರಿಸುವ ಬಗ್ಗೆ ಸಹಾಯವಾಣಿ ಕೇಂದ್ರದಲ್ಲಿ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಚುನಾವಣೆ ವಿಷಯ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ದೂರುಗಳನ್ನು ನೀಡಲು ಸಹಾಯವಾಣಿ ಕೇಂದ್ರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.