Home Photo news ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ವಾಗತ

ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ವಾಗತ

SHARE

ಕುಮಟಾ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಅಬ್ದುಲ್ ಗಫಾರ ಮುಲ್ಲಾ ಅವರು ತಾಲೂಕಿನ ಎಲ್ಲ ಪ್ರೌಢಶಾಲೆಗಳ ಮುಖ್ಯಾಧ್ಯಾಪಕರ ಸಭೆ ಕರೆದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಅತ್ಯುತ್ತಮ ಪಡಿಸಲು ಮಾರ್ಗದರ್ಶನ ನೀಡಿದರು.

ಹಿಂದಿನ ಸಾಲಿನ ಫಲಿತಾಂಶ ತೃಪ್ತಿಕರವಾಗಿದ್ದರೂ ಸಹ ಇನ್ನೂ ಹೆಚ್ಚಿನ ಶ್ರೇಯಾಂಕದತ್ತ ಚಿತ್ತ ಹರಿಸಬೇಕಾದ ಅಗತ್ಯವಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಮುಖ್ಯಾಧ್ಯಾಪಕರ ಸಂಘದ ಕಾರ್ಯದರ್ಶಿ ದಯಾನಂದ ದೇಶಭಂಡಾರಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.