Home Local ಡಿ:16 ರಂದು ದಾಂಡೇಲಿಯಲ್ಲಿ ಶ್ರೀ ಸತ್ಯ ನಾರಾಯಣ ಪೂಜಾ ಕಾರ್ಯಕ್ರಮ.

ಡಿ:16 ರಂದು ದಾಂಡೇಲಿಯಲ್ಲಿ ಶ್ರೀ ಸತ್ಯ ನಾರಾಯಣ ಪೂಜಾ ಕಾರ್ಯಕ್ರಮ.

SHARE

ದಾಂಡೇಲಿ : ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಒಕ್ಕೂಟಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಡಿ:16 ರಂದು ನಗರದಲ್ಲಿ ನಡೆಯಲಿರುವ ಶ್ರೀ ಸತ್ಯ ನಾರಾಯಣ ಪೂಜಾ ಕಾರ್ಯಕ್ರಮದ ಕುರಿತಂತೆ ನಗರದ ಸಂತೋಷ್ ಹೋಟೆಲ್ ಸಭಾಭವನದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ಜರುಗಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳುಂಕೆಯವರು ನಗರದ ಅಭಿವೃದ್ಧಿಗೆ ತನ್ನದೆ ಆದ ಕೊಡುಗೆ ನೀಡುತ್ತಿರುವ ಧರ್ಮಸ್ಥಳ ಸಂಸ್ಥೆಯ ಕಾರ್ಯಕ್ರಮಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ತಿ ಉಪಯುಕ್ತವಾಗಿದೆ. ಸತ್ಯ ನಾರಾಯಣ ಪೂಜಾ ಕಾರ್ಯಕ್ರಮದ ಯಶಸ್ಸಿಗೆ ನಗರಾಡಳಿತದಿಂದ ಸಹಕಾರ ನೀಡಲಾಗುವುದೆಂದು ಭರವಸೆ ನೀಡಿದರು.

ಸಹೇಲಿ ಟ್ರಸ್ಟಿನ ಅಧ್ಯಕ್ಷೆ ಮೀನಾಕ್ಷಿ ಕನ್ಯಾಡಿ ಮಾತನಾಡಿ ಅಚ್ಚುಕಟ್ಟುತನ ಹಾಗೂ ಶಿಸ್ತುಬದ್ದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಲ್ಲಿ ಧರ್ಮಸ್ಥಳ ಸಂಸ್ಥೆ ಮಾದರಿಯಾಗಿದೆ. ಸರ್ವರ ಸಹಕಾರದಲ್ಲಿ ಸತ್ಯ ನಾರಾಯಣ ಪೂಜಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳುವ ಮೂಲಕ ಸ್ವಸ್ಥ ನಗರ ನಿರ್ಮಾಣಕ್ಕೆ ಮುನ್ನುಡಿ ಬರೆಯೋಣ ಎಂದರು.
ಇದೇ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಶಂಕರ ಮುಂಗರವಾಡಿ, ಪತ್ರಕರ್ತ ಸಂದೇಶ್.ಎಸ್.ಜೈನ್, ವಿಶ್ವ ಹಿಂದು ಪರಿಷತ್ತಿನ ನಗರ ಘಟಕದ ಅಧ್ಯಕ್ಷ ಶಂಕರ ಗಣಾಚಾರಿ, ನಗರ ಸಭಾ ಸದಸ್ಯರುಗಳಾದ ಯಾಸ್ಮಿನ್ ಕಿತ್ತೂರು, ನಮಿತಾ ಹಳದನಕರ, ವನವಾಸಿ ಕಲ್ಯಾಣ ಸಂಸ್ಥೆಯ ರವೀಂದ್ರ ಲಕ್ಷ್ಮೇಶ್ವರ, ಮರಾಠಾ ಸಮಾಜದ ಮುಖಂಡ ನಾರಾಯಣ ಪಾಟೀಲ, ಒಕ್ಕೂಟದ ಅಧ್ಯಕ್ಷೆ ರತ್ನ ಅವಧಾನಿ ಮೊದಲಾದವರು ಮಾತನಾಡಿ ಸಹಕಾರದ ಭರವಸೆ ನೀಡಿದರು. ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕ ಉಪಸ್ಥಿತರಿದ್ದರು.

ಪೂಜಾ ಕಾರ್ಯಕ್ರಮದ ಬಗ್ಗೆ ಶ್ರೀ.ಕ್ಷೇತ್ರ.ಧ.ಗ್ರಾ ಯೋಜನೆಯ ಜಿಲ್ಲಾ ನಿರ್ದೇಶಕ ಲಕ್ಷ್ಮಣ.ಎಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಜನಾಧಿಕಾರಿ ಹರೀಶ ಸ್ವಾಗತಿಸಿದರು. ಮೇಲ್ವಿಚಾರಕ ಲೋಕೇಶ ಗೌಡ ವಂದಿಸಿದರು.